ಗುರುವೆಂದು ಪ್ರಮಾಣಿಸಿದಲ್ಲಿ, ಪ್ರತ್ಯುತ್ತರವಿಲ್ಲದೆ ನಿಗರ್ವಿಯಾಗಿರಬೇಕು.
ಲಿಂಗವೆಂದು ಪ್ರಮಾಣಿಸಿದಲ್ಲಿ, ಸಂದೇಹವಿಲ್ಲದಿರಬೇಕು.
ಜಂಗಮವೆಂದು ಪ್ರಮಾಣಿಸಿದಲ್ಲಿ, ತ್ರಿವಿಧದ ಹಂಗಿಲ್ಲದಿರಬೇಕು.
ಇದರಂದ ಒಂದೂ ಇಲ್ಲದೆ ಭಕ್ತರಾದೆವೆಂಬ ಮಿಟ್ಟೆಯ ಭಂಡರ ನೋಡಾ,
ನಿಃಕಳಂಕ ಮಲ್ಲಿಕಾರ್ಜುನಾ.
Art
Manuscript
Music
Courtesy:
Transliteration
Guruvendu pramāṇisidalli, pratyuttaravillade nigarviyāgirabēku.
Liṅgavendu pramāṇisidalli, sandēhavilladirabēku.
Jaṅgamavendu pramāṇisidalli, trividhada haṅgilladirabēku.
Idaranda ondū illade bhaktarādevemba miṭṭeya bhaṇḍara nōḍā,
niḥkaḷaṅka mallikārjunā.