ವಚನ - 793     
 
ಅಯ್ಯಾ! ನಿರವಯಶೂನ್ಯಲಿಂಗಮೂರ್ತಿಯ ನಿಲುಕಡೆ ಎಂತೆಂದಡೆ: ಸಾಕಾರನಲ್ಲ ನಿರಾಕಾರನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಆದಿಯಲ್ಲ ಅನಾದಿಯಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಇಹದವನಲ್ಲ ಪರದವನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಸುಖದವನಲ್ಲ ದುಃಖದವನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಪುಣ್ಯದವನಲ್ಲ ಪಾಪದವನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಕರ್ತುವಲ್ಲ ಭೃತ್ಯನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಕಾರಣನಲ್ಲ ಕಾರ್ಯನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಧರ್ಮಿಯಲ್ಲ ಕರ್ಮಿಯಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಪೂಜ್ಯನಲ್ಲ ಪೂಜಕನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಇಂತು ಉಭಯವಳಿದು ಬೆಳಗುವ ಸಂಗನ ಬಸವಣ್ಣನ ಹೃತ್ಕಮಲಮಧ್ಯದಲ್ಲಿ ನೆಲಸಿರ್ಪುದು ನೋಡಾ! ಗುಹೇಶ್ವರಲಿಂಗವು ಚೆನ್ನಬಸವಣ್ಣ.