Index   ವಚನ - 497    Search  
 
ಪೃಥ್ವಿ ಅಪ್ಪುವಿನ ಸಂಗದಲ್ಲಿ, ಅನಲ ಅನಿಲವೆಂಬ ಪುತ್ಥಳಿ ಹುಟ್ಟಿತ್ತು. ಆ ಪುತ್ಥಳಿಯ ಗರ್ಭದಲ್ಲಿ, ಆಕಾಶ ಮಹದಾಕಾಶವೆಂಬ ಕುರುಹುದೋರಿತ್ತು. ಅದು ನಾದಪೀಠ ಬಿಂದುಲಿಂಗ ಕಳೆ ವಸ್ತುವಾಗಿ, ಹೊಳಹುದೋರುತ್ತದೆ. ಆ ಹೊಳಹು ಆರುಮೂರಾದ ಭೇದವ ತಿಳಿದು, ಮೂರು ಏಕವಾದಲ್ಲಿ, ಐಕ್ಯವನರಿತಲ್ಲಿ, ನಾದಬಿಂದು ಕಳೆಭೇದವಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.