Index   ವಚನ - 800    Search  
 
ಅಯ್ಯಾ! ಯಂತ್ರಗಾರನಲ್ಲ ಮಂತ್ರಗಾರನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಕುಳನಲ್ಲ ವ್ಯಾಕುಳನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಪಾಶನಲ್ಲ ಪಾಶಬದ್ಧನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಕಾಲನಲ್ಲ ಕರ್ಮನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಅಂಗವಿಕಾರಿಯಲ್ಲ ಮನವಿಕಾರಿಯಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಸೂಯನಲ್ಲ ಅಸೂಯನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಜಪದವನಲ್ಲ ತಪದವನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ವೈದಿಕನಲ್ಲ ವ್ಯವಹಾರಿಕನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಸಿದ್ಧನಲ್ಲ ಪ್ರಸಿದ್ಧನಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಸುಖಿಯಲ್ಲ ದುಃಖಿಯಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಪಾಪಿಯಲ್ಲ ಕೋಪಿಯಲ್ಲ ನೋಡಾ! ನಿರವಯಶೂನ್ಯಲಿಂಗಮೂರ್ತಿ. ಕರ್ಮಿಯಲ್ಲ ಧರ್ಮಿಯಲ್ಲ ನೋಡಾ ನಿರವಯಶೂನ್ಯಲಿಂಗಮೂರ್ತಿ. ಇಂತು ಉಭಯವಳಿದು ಸಂಗನಬಸವಣ್ಣನ ಪಂಚಪರುಷಮೂರ್ತಿಯಾಗಿ ಬೆಳಗುವ ಜ್ಯೋತಿ ತಾನೆ ನೋಡಾ ಗುಹೇಶ್ವರಲಿಂಗವು, ಚೆನ್ನಬಸವಣ್ಣಾ.