Index   ವಚನ - 559    Search  
 
ಭಕ್ತನ ಅಂಗಸ್ಥಲ, ಮಾಹೇಶ್ವರನ ಭಾವಸ್ಥಲ, ಪ್ರಸಾದಿಯ ಜ್ಞಾನಸ್ಥಲ, ಪ್ರಾಣಲಿಂಗಿಯ ಉಭಯಸ್ಥಲ, ಶರಣನ ಏಕಸ್ಥಲ, ಐಕ್ಯನ ಕೂಟಸ್ಥಲ. ಇಂತೀ ಆರು ಸ್ಥಲವ ವೇಧಿಸಿ ನಿಂದಲ್ಲಿ, ಮಹದೈಕ್ಯ ಏಕಮೂರ್ತಿ, ನಿಃಕಳಂಕ ಮಲ್ಲಿಕಾರ್ಜುನಾ.