Index   ವಚನ - 564    Search  
 
ಭಕ್ತನಾದ ಮತ್ತೆ ಬಂಧಗಳ ಬಿಡಬೇಕು. ವಿರಕ್ತನಾದ ಮತ್ತೆ ಧರಿತ್ರಿಯಲ್ಲಿ ಸುಖಕ್ಕೆ ಸಿಕ್ಕಿ ಮತ್ತನಾಗದಿರಬೇಕು. ಇಕ್ಕುವರ ಬಾಗಿಲ ಕಾಯದೆ, ಸುಚಿತ್ತದಿಂದ ಬಂದ ಭಿಕ್ಷವ ಕೊಂಡು, ಅನಿತ್ಯವ ಮರೆದು, ಸತ್ತುಚಿತ್ತಾನಂದ ಭಕ್ತ ಜಂಗಮಕ್ಕೆ ನಿತ್ಯ ನಮೋ ನಮೋ, ನಿಃಕಳಂಕ ಮಲ್ಲಿಕಾರ್ಜುನಾ.