Index   ವಚನ - 593    Search  
 
ಭಿತ್ತಿಯ ಮೇಲಣ ಚಿತ್ರದ ಬೊಂಬೆಯ ಕೈಯಲ್ಲಿ, ಹೊತ್ತುವ ದೀಪ ಇದ್ದಡೇನು, ಕತ್ತಲೆಯ ಬಿಡಿಸಬಲ್ಲುದೆ ? ನಿಷ್ಟೆಹೀನನಲ್ಲಿ ಇಷ್ಟಲಿಂಗ ಇರುತಿರಲಿಕ್ಕೆ ದೃಷ್ಟವ ಬಲ್ಲನೆ ? ಭಕ್ತಿಹೀನಂಗೆ ನಿತ್ಯಾನಿತ್ಯವ ಹೇಳಲಿಕ್ಕೆ ನಿಶ್ಚಯಿಸಬಲ್ಲನೆ, ನಿಃಕಳಂಕ ಮಲ್ಲಿಕಾರ್ಜುನಾ ?