Index   ವಚನ - 596    Search  
 
ಭೂಮಿಯಲ್ಲಿ ಪೂಜಿಸಿಕೊಂಬ ಅರುಹಿರಿಯರೆಲ್ಲರೂ ವೇದ ಶಾಸ್ತ್ರ ಪುರಾಣ ಆಗಮ ಶ್ರುತಿ ಸ್ಮೃತಿ ತತ್ವದಿಂದ ಇದಿರಿಗೆ ಬೋಧಿಸಿ ಹೇಳುವ ಹಿರಿಯರೆಲ್ಲರೂ ಹಿರಿಯರಪ್ಪರೆ ? ನುಡಿದಂತೆ ನಡೆದು, ನಡೆದಂತೆ ನುಡಿದು, ನಡೆನುಡಿಸಿದ್ಧಾಂತವಾಗಿಯಲ್ಲದೆ ಅರುಹಿರಿಯರಾಗಬಾರದು. ಗೆಲ್ಲಸೋಲಕ್ಕೆ ಹೋರಿ ಬಲ್ಲಿದರಾದೆವೆಂದು ತನ್ನಲ್ಲಿದ್ದ ಹುಸಿಯ ಹುಸಿವ ಕಲ್ಲೆದೆಯವನ ನೋಡಾ. ಇವರೆಲ್ಲರ ಬಲ್ಲತನವ ಕಂಡು ನಿಲ್ಲದೆ ಹೋದ, ನಿಃಕಳಂಕ ಮಲ್ಲಿಕಾರ್ಜುನ.