Index   ವಚನ - 806    Search  
 
ಅಯ್ಯಾ, ಸತ್ಯವ ನುಡಿಯದ, ಸದಾಚಾರದಲ್ಲಿ ನಡೆಯದ, ಸದ್ಭಕ್ತಿಯ ಹಿಡಿಯದ, ನಿಜಮುಕ್ತಿಯ ಪಡೆಯದ, ಸತ್ಕ್ರಿಯವ ಸಾರದ ಸಮ್ಯಜ್ಞಾನವ ಮುಟ್ಟದ, ಸುಡು ಸುಡು-ಈ ವೇಷದ ಭಾಷೆಯ ನೋಡಿ ಗುಹೇಶ್ವರಲಿಂಗವು ನಗುತ್ತೈದಾನೆ ಕಾಣಾ ಚೆನ್ನಬಸವಣ್ಣಾ.