ಮಹಾರಾಣುವೆಯ ಬಿಟ್ಟು ಬಂದು,
ಮತ್ತೆ ಒಡೆಯರು ಭಕ್ತರಲ್ಲಿ ರಾಣಿವಾಸವೆಂದು ಕಟ್ಟು ಮೆಟ್ಟುಂಟೆ ?
ಖಂಡಿತ ಕಾಯವನಂಗೀಕರಿಸಿದ ಭಕ್ತಂಗೆ,
ಮತ್ತೆ ಹೆಂಡತಿ ಮಕ್ಕಳು ಬಂಧುಗಳೆಂದು
ಜಂಗಮಕ್ಕೆ ತಂದ ದ್ರವ್ಯವನ್ಯರಿಗಿಕ್ಕಿ, ತಾನುಂಡನಾದಡೆ,
ತಿಂಗಳು ಸತ್ತ ಹುಳಿತನಾಯ ಕಾಗೆ ತಿಂದು,
ಆ ಕಾಗೆಯ ಕೊಂದು ತಿಂದ ಭಂಡಂಗೆ ಕಡೆ.
ನಿಃಕಳಂಕ ಮಲ್ಲಿಕಾರ್ಜುನಲಿಂಗವೆ, ನೀವೆ ಬಲ್ಲಿರಿ.