Index   ವಚನ - 808    Search  
 
ಅಯ್ಯಾ! ಸದಾಚಾರಸದ್ಭಕ್ತಿಯಿಲ್ಲದ ಗುರುತ್ವ ಉಂಟೇನೊ ಮರುಳೆ? ಸದಾಚಾರಸದ್ಭಕ್ತಿಯಿಲ್ಲದ ನಿಜಲಿಂಗ ಉಂಟೇನೊ ಮರುಳೆ? ಸದಾಚಾರಸದ್ಭಕ್ತಿಯಿಲ್ಲದ ನಿಜಜಂಗಮತ್ವ ಉಂಟೇನೊ ಮರುಳೆ? ಸದಾಚಾರಸದ್ಭಕ್ತಿಯಿಲ್ಲದ ಶರಣತ್ವ [ಉಂಟೇನೊ ಮರುಳೆ] ಗುಹೇಶ್ವರ ಲಿಂಗ[ದಲ್ಲಿ] ಸದಾಚಾರಸದ್ಭಕ್ತಿಯಿಂದಲ್ಲದೆ ನಿಜಮೋಕ್ಷವುಂಟೆ ಚೆನ್ನಬಸವಣ್ಣಾ?