Index   ವಚನ - 644    Search  
 
ಮಾತಿನಲ್ಲಿ ನಿರ್ವಾಣ, ಆತ್ಮನಲ್ಲಿ ಘಾತಕ, ಕೂಸು ಹೇತು ಕಲಿಸುವಂತೆ, ತ್ರಿವಿಧದ ಆಸೆಗೆ ಸಿಕ್ಕಿ ಸಾವ ತೂತರಿಗೆಲ್ಲಿಯದೊ ಲಿಂಗ ? ಅದೇತರ ನಿರ್ವಾಣ ? ಏತದ ಕೂನಿಯಂತೆ, ರಾಟಾಳದಂತೆ, ಭವಪಾಶದಲ್ಲಿ ಬಿದ್ದು ಘಾಸಿಯಾದ ಮತ್ತೆ ನಿನಗಿನ್ನೇತರ ಭಾಷೆಯೊ, ನಿಃಕಳಂಕ ಮಲ್ಲಿಕಾರ್ಜುನಾ ?