Index   ವಚನ - 699    Search  
 
ವಾರಿಧಿಯ ಹೊಯ್ದು ಬೇರ್ಪಡಿಸಬಹುದೆ ? ಫಲದೊಳಗಣ ಬೀಜ ಬಲಿವುದಕ್ಕೆ ಮೊದಲೆ ತೆಗೆಯಬಹುದೆ ? ಮಹಾಘನವನರಿವುದಕ್ಕೆ ಮೊದಲೆ, ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನಹ ಪರಿ ಇನ್ನೆಂತೊ ? ಇಕ್ಷುದಂಡ ಬಲಿವುದಕ್ಕೆ ಮೊದಲೆ ತನಿರಸ ಬಹುದೆ ? ನಾನೆಂಬುದಕ್ಕೆ ಸ್ಥಾಣು, ಅಹುದಕ್ಕೆ ಭಾವದ ಬಲಿಕೆ ಇನ್ನಾವುದು, ನಿಃಕಳಂಕ ಮಲ್ಲಿಕಾರ್ಜುನಾ ?