Index   ವಚನ - 730    Search  
 
ಸತ್ವಗೆಟ್ಟಲ್ಲಿ ಕಾಷ್ಠವನೂರಿ ನಡೆಯಬೇಕು. ಮತ್ತತ್ವವಿದ್ದಲ್ಲಿ ನಿಶ್ಚಯವ ಹೇಳಲಾಗಿ, ಮಹಾಪ್ರಸಾದವೆಂದು ಕೈಕೊಳಬೇಕು. ಎನ್ನ ಭಕ್ತಿಗೆ ನೀ ಶಕ್ತಿಯಾದ ಕಾರಣ, ಎನ್ನ ಸತ್ಯಕ್ಕೆ ನೀ ಸತಿಯಾದ ಕಾರಣ, ಎನ್ನ ಸುಖದುಃಖ ನಿನ್ನ ಸುಖದುಃಖ, ಅನ್ಯವಿಲ್ಲ. ಇದಕ್ಕೆ ಭಿನ್ನಭೇದವೇನು ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ ?