ವಚನ - 827     
 
ಅರಿವನರಿದಹೆನೆಂಬುದು ಮರವೆ, ಮರಹ ಮರೆದಹೆನೆಂಬುದು ಮರವೆ, ಸಾಕಾರ ನಷ್ಟ ನಿರಾಕಾರ ದೃಷ್ಟವೆಂಬುದು ಭಾವದ ಬಳಲಿಕೆ. ಗುರುವೆಂಬುದು ಶಿಷ್ಯನೆಂದಲ್ಲಿಯೆ ಹೋಯಿತ್ತು. ಶಿಷ್ಯನೆಂಬುದು ಗುರುವೆಂದಲ್ಲಿಯೆ ಹೋಯಿತ್ತು. ನಿರ್ಣಯದಲ್ಲಿ ನಿಜೈಕ್ಯನಾದಹೆನೆಂದಡೆ, ಎಚ್ಚರಿಕೆಯಲ್ಲಿ ತಪ್ಪಿತ್ತು. ಸಹಜ ಸಂಬಂಧಕ್ಕೆ ಗುರುವಲ್ಲದೆ ಅಸಹಜಕ್ಕೆ ಗುರುವುಂಟೆ? ಗುಹೇಶ್ವರಲಿಂಗದಲ್ಲಿ ಪರವೆಂದಲ್ಲಿ ಗುರುವುಂಟಲ್ಲದೆ ಸ್ವಯವೆಂದಲ್ಲಿ ನುಡಿಯಲಿಲ್ಲ.