Index   ವಚನ - 79    Search  
 
ನಾ ಹುಟ್ಟಿದ ದ್ವಾದಶವರ್ಷಕ್ಕೆ ಎನ್ನ ತಂದೆ ದ್ವಾದಶಮಂತ್ರವ ಕಲಿಸಿದ. ಒಂದು ಮಂತ್ರದಿಂದ ಮರ್ತ್ಯಲೋಕವ ಸುಟ್ಟೆ. ಒಂದು ಮಂತ್ರದಿಂದ ಪಾತಾಳಲೋಕವ ಸುಟ್ಟೆ. ಒಂದು ಮಂತ್ರದಿಂದ ಸ್ವರ್ಗಲೋಕವ ಸುಟ್ಟೆ. ಮೂರು ಮಂತ್ರದಿಂದ ಮುಪ್ಪುರದರಸುಗಳ ಕೊಂದೆ. ಆರು ಮಂತ್ರದಿಂದ ಆರು ವರ್ಣವ ಸುಟ್ಟೆ. ಇಂತೀ ಮಂತ್ರವ ಮಂತ್ರಿಸುವ ವೇಳೆಯಲ್ಲಿ ನಾ ಸತ್ತು ಕಾಯಕವ ಮಾಡುತಿರ್ದೆನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.