ವಚನ - 835     
 
ಅರಿವಿನ ಹೃದಯ ಕಂದೆರೆಯಬೇಕೆಂದು ಗುರುವೆಂದು ಕಲ್ಪಿಸಿಕೊಂಬರಲ್ಲದೆ, ಗುರುವೆಂದೆನಲುಂಟೆ ಶಿಷ್ಯಂಗೆ? ಶಿಷ್ಯನೆಂದೆನಲುಂಟೆ ಗುರುವಿಂಗೆ? ಗಮನಾಗಮನನಾಸ್ತಿಯಾದ ಲಿಂಗಕ್ಕೆ ಅಂಗವೆಲ್ಲಿಯದು ಹೇಳಾ ಗುಹೇಶ್ವರಾ?