ವಚನ - 836     
 
ಅರಿವಿನೊಳಗಣ ಮರಹು, ಮರಹಿನೊಳಗಣ ಅರಿವು! ಅರಿದು ಮರೆದು ನೆನೆದಡೆ ನೆಲೆಗೊಳ್ಳದು. ಅರಿವರಾರಯ್ಯ ಆಗಮ್ಯಲಿಂಗವನು? ಕೊಟ್ಟು ಕೊಂಡಾಡುವ ವ್ಯವಹಾರಕ್ಕೆಲ್ಲಿಯದೊ? ನೀರಲೊದಗಿದ ಬೆಣ್ಣೆ ಮುಗಿಲಲೊದಗಿದ ಕಿಚ್ಚು ಪವನನ ಶಬ್ದಸಂಚಕ್ಕೆ ಬಣ್ಣವುಂಟೆ? ಗುಹೇಶ್ವರಲಿಂಗದ ನಿಲವ ತೋರಬಾರದು, ಕೇಳಾ ಸಂಗನಬಸವಣ್ಣಾ.