ವಚನ - 841     
 
ಅರ್ಚನೆ ಪೂಜನೆಯ ನಿಮಗೆ ನಾನು ಹಂಗು ಹರಿಯಿಲ್ಲದೆ ಮಾಡುವೆನಯ್ಯಾ. ನಾ ಮಾಡುವ ಕ್ರೀಯೆಲ್ಲವು ನೀವೆಯಾದ ಕಾರಣ, ನಿಮ್ಮಲ್ಲಿ ತದ್ಗತನಾಗಿದ್ದೆ ಕಾಣಾ ಗುಹೇಶ್ವರಾ.