Index   ವಚನ - 208    Search  
 
ಇಂತಪ್ಪ ಲಿಂಗಾಂಗದ ಸಮರಸವ ತಿಳಿಯದೆ, ಆವ ನೇಮ ವ್ರತವ ಪಿಡಿದು ಆಚರಿಸಿದಡೆ ಮುಂದೆ ಭವಬಂಧನವೇ ಪ್ರಾಪ್ತಿಯಾಗುವದು. ಮತ್ತಂ, ವಾರದಫಲ ಬಯಸುವವರಿಗೆ ಗುರುವಿಲ್ಲ. ಮಾಸದ ಫಲ ಬಯಸುವವರಿಗೆ ಲಿಂಗವಿಲ್ಲ. ಚತುರ್ದಶಿ ಫಲ ಬಯಸುವವರಿಗೆ ಜಂಗಮವಿಲ್ಲ. ಆ ಮಾಸದ ಫಲ ಬಯಸುವವರಿಗೆ ಪಾದೋದಕವಿಲ್ಲ. ಗ್ರಹಣ ಫಲ ಬಯಸುವವರಿಗೆ ಪ್ರಸಾದವಿಲ್ಲ. ಇಂತಪ್ಪ ಫಲವ ಬಯಸಿ ಮಾಡಬೇಕೆಂಬವರಿಗೆ ವಿಭೂತಿ, ರುದ್ರಾಕ್ಷಿ, ಮಂತ್ರ ಮೊದಲಾದ ಅಷ್ಟಾವರಣವು ಇಲ್ಲ. ಇತಂಪ್ಪ ವ್ರತಭ್ರಷ್ಟ ಹೊಲೆಯರಿಗೆ ವೀರಮಹೇಶ್ವರರೆಂದಡೆ ನಿರ್ಮಾಯಪ್ರಭುವಿನ ಶರಣರು ನರಕದಲ್ಲಿಕ್ಕದೆ ಬಿಡುವರೆ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ