ವಚನ - 848     
 
ಅಶನಕ್ಕಂಜಿ ವೇಷವನೆ ಹೊತ್ತು ದೇಶವ ತೊಳಲುವ ಹಿರಿಯರ ಗಂಡ, ಕಾಲನ ಗಂಡ ಕರ್ಮದ ಗಂಡ, ಲಿಂಗವಿಡಿದು ಸಾವ ಹಿರಿಯರ ಗಂಡ, ಗುಹೇಶ್ವರಾ ನಿಮ್ಮ ಶರಣ ಘಟ್ಟಿವಾಳ, ಅಲ್ಲಮನಂತಿಂತೆಂಬವರ ಗಂಡ.