Index   ವಚನ - 231    Search  
 
ರಂಡೆಮುಂಡೆಯ ಮಗ ರಾಜಕುಮಾರ ಗಗನದಲ್ಲಿ ಪುಟ್ಟಿ, ಭೂಮಿಯಲ್ಲಿ ಬಂದು, ಆ ಭೂಮಿಯ ರಾಜನಲ್ಲಿ ಯುದ್ಧವ ಮಾಡಿ, ಆನೆಯ ಹಲ್ಲು ಕಿತ್ತು, ಕುಂಭವನೊಡೆದು, ಕುದುರೆಯ ಕಾಲ ಮುರಿದು, ನಾಯಿಯ ನಾಲಿಗೆ ಕಿತ್ತು, ಬೆಕ್ಕಿನ ಕಣ್ಣು ಕಳೆದು ಉಣ್ಣದೆ ಉಪವಾಸ ಮಾಡದೆ ಯುದ್ಧದಿಂ ತ್ರಿಲೋಕದ ರಾಜರ ಗೆದ್ದು, ತ್ರಿಲೋಕದ ರಾಜರಲ್ಲಿ ಸತ್ತು ನಿಂದಿತ್ತು. ಈ ಭೇದವ - ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವಿನ ಶರಣರು ಬಲ್ಲರಲ್ಲದೆ ಮಿಕ್ಕಿನ ಜೀವಾತ್ಮರು ಅರಿಯರು.