ವಚನ - 858     
 
ಆಕಾಶದಂತರಂಗದಲ್ಲಿ ತೋರುವ ಸಕಲ ವರ್ಣಂಗಳ ವರ್ಣಿಸುವರು, ನಿರವಯದ ನಿಲವನೆತ್ತ ಬಲ್ಲರು? ಅರಿವನಾಶ್ರಯಿಸಿ ಮನವ ಮುಂದುಗೊಂಡು ನೆನಹಿಂಗೆ ಗುರಿಯಾದವರೆಲ್ಲರೂ ನಿರವಯದ ನಿಲವನೆತ್ತ ಬಲ್ಲರು? ವರ್ಣನಾಮವಳಿಯದಾಗಿ. ಆಕಾಶದಂತರಂಗ ಬಹಿರಂಗವೆನಲಿಲ್ಲದ ನಿರವಯವು! ಗುಹೇಶ್ವರನೆನಲಿಲ್ಲದ ನಿಲವಿಗೆ ಸೊಲ್ಲು ಸಲ್ಲುವುದೆ?