Index   ವಚನ - 331    Search  
 
ಪರ್ಣ ಉದುರಿದ ವೃಕ್ಷ ಕಡಿದು, ಕೊಂಗೆಯ ಸವರದೆ ಮನೆಯ ಕಟ್ಟಿ, ಪಾತಾಳದ ಬೇತಾಳಂಗೆ ರುದ್ರನನಾಹುತಿಯ ಕೊಟ್ಟು, ಸ್ವರ್ಗಲೋಕದ ಮಾರೇಶ್ವರಂಗೆ ವಿಷ್ಣುವಿನ ಆಹುತಿ ಕೊಟ್ಟು, ಮರ್ತ್ಯಲೋಕದ ಜಗಜಟ್ಟಿಗೆ ಬ್ರಹ್ಮನ ಆಹುತಿ ಕೊಟ್ಟು, ಉಳಿದಲೋಕದ ಭೂತಂಗಳಿಗೆ ಷಟ್‍ಸ್ಥಲದ ಭವಿಗಳ ಕೊಟ್ಟು, ಜನಿವಾರ ಹರಿದು ಗಂಧವ ಧರಿಸದೆ, ಜಳಕವ ಮಾಡದೆ, ಮಡಿ ಉಡದೆ, ಮೈಲಿಗೆಯನುಟ್ಟು, ಉಣ್ಣದ ಆಹಾರವನುಂಡು ಕಾಯಕವ ಮಾಡುತ್ತಿರ್ಪರು ನೋಡೆಂದ, ಕಾಡನೋಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.