ವಚನ - 871     
 
ಆಣವಮಲ ಮಾಯಾಮಲ ಕಾರ್ಮಿಕಮಲವೆಂಬ ಮಲತ್ರಯಂಗಳಳಿದು ನಿರ್ಮಲನಾದ ಶಿಷ್ಯ, ಕಾಯಜೀವದ ಭ್ರಾಂತುಸೂತಕ ಹಿಂಗಿ ನಿಶ್ಯಂಕನಾದ ಗುರು. ಈ ಉಭಯ ಭಾವದೊಳಗೆ ಆವುದು ಮುಂದು ಆವುದು ಹಿಂದೆಂದರಿಯಬಪ್ಪುದು? ಕರಸ್ಥಲಕ್ಕೆ ಕಾರುಣ್ಯವ ಮಾಡಿದಡೆ ಮನಸ್ಥಲಕ್ಕೆ ಹಂಗಿಲ್ಲ. ಮನಸ್ಥಲದಲ್ಲಿ ಸೆರಗೊಡ್ಡಿ ಬೇಡಿರ್ದಡೆ ಕರಸ್ಥಲದ ಲಿಂಗ ಕೈಸಾರಿತ್ತು! ಗುರುಸ್ಥಲದ ನಿಲವು ಪರಸ್ಥಲದಲಡಗಿದರೆ ಭಾವ ಬಳಲಿತ್ತಿದೇನೊ ಗುಹೇಶ್ವರಾ?