ಭವಾರಣ್ಯದಲ್ಲಿ ಪ್ರವೇಶಿಸುತ್ತಿಪ್ಪವಂಗೆ,
ಬೆಂದಜ್ಞಾನದಿಂದ ಸುತ್ತುತ್ತ
ಹಿಂದು ಮುಂದು ಎಡ ಬಲ ಆದಿ ಆಕಾಶ
ನಡುಮಧ್ಯ ಆವುದೆಂದರಿಯದವಂಗೆ,
ಇರುವುದಕ್ಕೆ ಇಂಬುಗಾಣದವಂಗೆ,
ಶಿವತತ್ವವೆ ಆಶ್ರಯ ಇದೆಯೆಂದು ತೋರಿದ
ಸದ್ಗುರುದೇವಂಗೆ ನಮೋ ನಮೋ ಎಂಬೆನಯ್ಯ
ಅಖಂಡ ಪರಿಪೂರ್ಣ ಘನಲಿಂಗಗುರು
ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.