Index   ವಚನ - 87    Search  
 
ಧರೆಯನಾಳುವ ಪರವಾದಿ ಬಿಜ್ಜಳನು ಮಡಿವಾಳಯ್ಯಗಳು ಕರೆಯಕಳುಹಿದರೆ ಬಾರದಿರಲು ಪಟ್ಟದಾನೆಯ ಮೇಲೆ ಪರಿಪರಿಬಣ್ಣ ಸಣ್ಣವಸ್ತ್ರವ ಹೇರಿಸಿ ಶರಧಿಯ ಮುಂದೆ ನೀ ನೂಕಿ ಬಾಯೆಂದು ಕಳುಹಲು, ಬರುವ ಪಟ್ಟದಾನೆಯ ಕಂಡು ಕಂಗೆಡದೆ ಕಡೆಗೋಡದೆ ತಟ್ಟನೆ ಸೀಳಿ ನಿಟ್ಟೆಲುವ ಮುರಿದು ಹೊದಕೆಯ ಮುರಿಗಿ ಮಾಡಿ ತಲೆಯ ಹರಿಯಲಿಟ್ಟು ದುಕೂಲವ ಸುಟ್ಟು ಪರಿಚಾರರ ನೆರೆಯಟ್ಟಿ ತಲೆಗಳ ಕುಟ್ಟುವದ ಕೇಳಿ ಕಂಗೆಟ್ಟು ಕಾಲಿಗೆರಗಲು ಕರುಣವ ಪಡೆದ ನಿಷ್ಠೆಯ ವೀರಮಡಿವಾಳಯ್ಯಗಳಿಗೆ ಶರಣು ಶರಣಾರ್ಥಿ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.