Index   ವಚನ - 886    Search  
 
ಆದಿಯ ಕಂಡೆ, ಅನಾದಿಯ ಕಂಡೆ ಘನವ ಕಂಡೆ, ಮನವ ಕಂಡೆ, ಅನುವ ಕಂಡೆ ಆಯತ ಸ್ವಾಯತ ಸನ್ನಿಹಿತವ ಕಂಡೆ. ಗುಹೇಶ್ವರಲಿಂಗದಲ್ಲಿ ಬಸವಣ್ಣನ ಕೃಪೆಯಿಂದ, ನಿನ್ನ ಕಂಡೆ ಕಾಣಾ ಮಡಿವಾಳ ಮಾಚಯ್ಯಾ.