Index   ವಚನ - 15    Search  
 
ಶ್ರೀಗುರುಲಿಂಗಜಂಗಮದ ಧೂಳಪಾದೋದಕದಿಂದ ಸಮಸ್ತಲೋಕದ ಪ್ರಾಣಿಗಳನೆಲ್ಲವ ಭವತ್ವವಳಿದು ಭೃತ್ಯಭಕ್ತಿಮಾರ್ಗವ ತೋರುವುದಯ್ಯ, ಶ್ರೀಗುರುಲಿಂಗಜಂಗಮದ ದೀಕ್ಷಾಪಾದೋದಕದಿಂದ ಸಮಸ್ತ ಪದಾರ್ಥಂಗಳೆಲ್ಲವ ಶಿವಗಣಪದಕ್ಕೆ ಯೋಗ್ಯವಾಗುವಂತೆ ಮಾಡುವುದಯ್ಯ. ಶ್ರೀಗುರುಲಿಂಗಜಂಗಮದ ಶಿಕ್ಷಾಪಾದೋದಕದಿಂದ ಬ್ರಹ್ಮನ ಉತ್ಪತ್ಯ, ವಿಷ್ಣುವಿನ ಸ್ಥಿತಿ, ರುದ್ರನ ಲಯ, ಈಶ್ವರನ ತಿರೋಧಾನ, ಸದಾಶಿವನ ಅನುಗ್ರಹ ತೊಡದು ಶಿವಶರಣಗಣಂಗಳ ನಿಜನಿವಾಸವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಮಹಾಜ್ಞಾನ ಪಾದೋದಕದಿಂದ ಷಡ್ವಿಧ ದೀಕ್ಷಾತ್ರಯವ ಕರುಣಿಸಿ, ಷಟ್ಸ್ಥಲಮಾರ್ಗವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಸ್ಪರ್ಶನೋದಕ, ಅವಧಾನೋದಕ, ಆಪ್ಯಾಯನೋದಕದಿಂದ ತ್ರಿವಿಧಲಿಂಗಾಂಗ ಸಮರಸದ ಸನ್ಮಾರ್ಗಾಚಾರಕ್ರಿಯಾಜ್ಞಾನವ ತೋರುವುದಯ್ಯ. ಶ್ರಿಗುರುಲಿಂಗಜಂಗಮದ ಹಸ್ತೋದಕ-ಪರಿಣಾಮೋದಕ- ನಿರ್ನಾಮೋದಕದಿಂದ ಷಡ್ವಿಧಲಿಂಗಾಂಗ ಸಮರಸಾಚರಣೆಯ ಮಾರ್ಗದ, ಮೀರಿದ ಕ್ರಿಯಾಜ್ಞಾನವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಸತ್ಯೋದಕ-ಕರುಣಜಲ- ವಿನಯಜಲ-ಸಮತಾಜಲದಿಂದ ಸಮಸ್ತಪ್ರಮಥಗಣಂಗಳೆಲ್ಲ ಜ್ಯೋತಿರ್ಮಯವಾದರು ನೋಡ. ಶ್ರೀಗುರುಲಿಂಗಜಂಗಮದ ಪಾದೋದಕವೆ ಪರಮಾರಾಧ್ಯ ಶರಣಗಣಂಗಳಾಚಾರಸಂಪದಕ್ಕೆ ಪರಬ್ರಹ್ಮ ಜ್ಯೋತಿರ್ಮಯವಸ್ತು ನೋಡ ಸಂಗನಬಸವೇಶ್ವರ