Index   ವಚನ - 16    Search  
 
ಹರಹರ ಶಿವಶಿವ ಜಯಜ ಕರುಣಾಕರ ಮತ್ಪ್ರಾಣಕಳಾಚೈತನ್ಯಸ್ವರೂಪ ಮಹಾಪ್ರಭು ಶ್ರೀಗುರುಲಿಂಗಜಂಗಮದ ಮಹಾಪ್ರಸಾದವೆ ಪರಬ್ರಹ್ಮ ಪರಮಕಳಾಚೈತನ್ಯ ಚಿತ್ಸ್ವರೂಪ ಅನಾದಿ ನಿಷ್ಕಲ ಪರಶಿವಲಿಂಗಸ್ವರೂಪ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿಜಚೈತನ್ಯಸ್ವರೂಪು ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಶಿವಾನುಭಾವದ ಶುದ್ಧಿನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರುಪಮ ನಿರಾಲಂಬ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿತ್ಯ ಚಿದೈಶ್ವರ್ಯ ಚಿತ್ಕಾಂತಿ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿಜಮೋಕ್ಷದ ಕಣಿ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಭವರೋಗವೈದ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರ್ಗುಣ ನಿಷ್ಕಳಂಕ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಅಪ್ರಮಾಣ ಅಗೋಚರ ನಿಜಚಿನ್ಮಯರೂಪು ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಅಗಣಿತ ನಿರಾತಂಕ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರಾವಯ ನಿಶ್ಶೂನ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರ್ಮಾಯ ನಿಷ್ಕಾಮ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಚಿದ್ಬೆಳಗು ತಾನೆ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಚಿದ್ಘನಮಹಾಲಿಂಗ ತಾನೆ ನೋಡ ಸಂಗನಬಸವೇಶ್ವರ