ವಚನ - 902     
 
ಆ ಮೂಲಮಂತ್ರಮೂರ್ತಿಯ ನಿಲುಕಡೆಯ ಕೇಳಿರಯ್ಯ ಶರಣಗಣಂಗಳೆ; ಬ್ರಹ್ಮಾಂಡ ಮಧ್ಯದಲ್ಲಿ ಪಿಂಡಾಕೃತಿಯ ಧರಿಸಿ, ಆ ಪೂರ್ವಾಶ್ರಯ ಸ್ವರೂಪವಾದ ಪಿಂಡಬ್ರಹ್ಮಾಂಡಗಳ ಜೀವನವರ್ತನ ದುರ್ಮಾರ್ಗ ದುರ್ನಡತೆ ದುರಾಚಾರ ದುರ್ಗುಣಂಗಳ ತ್ಯಜಿಸಿ, ಗುರು ಲಿಂಗ ಜಂಗಮ ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ, ಶರಣ ಐಕ್ಯಗಣಂಗಳಲ್ಲಿ ಒಪ್ಪುತಿರ್ಪರು ನೋಡಾ, ನಿರವಯ ಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.