Index   ವಚನ - 17    Search  
 
ಮಕರತರ್ಕದ ಪ್ರಸ್ತಾವದ ವಚನ : ಅರಿಷಡ್ವರ್ಗವೆಂಬ ಆರು ನಾಯಿಗಳು ಬೊಗಳುತ್ತಿರೆ, ಹೊನ್ನು ಹೆಣ್ಣು ಮಣ್ಣೆಂಬ ತ್ರಿವಿಧ ನರಿ ಕೂಗುತ್ತಿರೆ, ಹಸಿವು ತೃಷೆ ನಿದ್ರೆ ಜಾಡ್ಯವೆಂಬ ನಾಲ್ಕು ಸೂಕರ ಮುತ್ತಿಕೊಂಡಿರೆ, ಸಪ್ತವ್ಯಸನಗಳೆಂಬ ಏಳು ಬೆಕ್ಕು ಸುಳಿವುತ್ತಿರೆ, ಪಂಚೇಂದ್ರಿಯವೆಂಬ ಐದು ವರ್ಣದ ಹುಲಿ ನುಂಗುತ್ತಿರೆ, ಸಪ್ತಧಾತುಗಳೆಂಬ ಏಳುಮಂದಿ ಹೊಲೆಯರು ಮುಟ್ಟಿ ತನ್ನಂಗದೊಳು ನಾನು ನೀನೆಂಬ ಅಹಂಕಾರದ ಜಾಗಟೆಯ ಪಿಡಿದು ಅಜ್ಞಾನವೆಂಬ ಕುಡಿಯಲ್ಲಿ ಬಾರಿಸಿ, ಇಂತಪ್ಪ ಪರಿಯಲ್ಲಿದ್ದ ಸೂತಕಂಗಳ ಪರಿಯದೆ ಹೊರಮಾತ ಕೇಳಬಾರದೆಂದು ಜಾಗಟೆಯ ಹೊಯ್ಸಿ ನಾದದ ಮರೆಯಲ್ಲಿ ಆಹಾರವ ಕೊಂಬ ಸೇವಕರ ನೋಡಿ ನಗುತಿರ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.