ವಚನ - 907     
 
ಆರಾಧಿಸಿ ವಿರೋಧಿಸುವರೆ? ಪೂಜಿಸಿ ಪೂಜೆಯ ಮರೆಯುವರೆ? ಜಂಗಮಲಿಂಗವೆಂದರಿದವರು ಸಂಚ ತಪ್ಪುವರೆ? ಗಾಳಿಯೂ ಗಂಧವೂ ಕೂಡಿದಂತೆ ಜಗದೊಳಗೆ ಇದೆ! ಕೀರ್ತಿವಾರ್ತೆಯ ಹಡೆದೆಯಲ್ಲಾ ಬಸವಣ್ಣಾ. ನಿನ್ನ ಶಿಶುವಿನೊಡತಣ ತೆರಹು ಮರಹ ವಸುಧೆಯೊಳಗಣ ಪ್ರಮಥರು ಮೆಚ್ಚುವರೆ? ತಿಳಿದು ನೋಡುವಡೆ ಗುಹೇಶ್ವರನ ಶರಣ ಅಲ್ಲಯ್ಯಂಗೆ ನೀನು ಪರಮಾರಾಧ್ಯ ಕಾಣಾ ಸಂಗನಬಸವಣ್ಣ.