Index   ವಚನ - 24    Search  
 
ಲಿಂಗಸೋಂಕಿ[ಅಂಗ] ಲಿಂಗವಾಗದಿದ್ದರೆ ಅದು ಲಿಂಗವಲ್ಲ. ಪ್ರಸಾದಸೋಂಕಿ[ಪದಾರ್ಥ] ಪ್ರಸಾದವಾಗದಿದ್ದರೆ ಅದು ಪ್ರಸಾದವಲ್ಲ,ಅದು ಅಶುದ್ಧ. ಮಂತ್ರಸೋಂಕಿ[ಮಾಂಸಪಿಂಡ] ಮಂತ್ರಮೂರ್ತಿಯಾಗದಿದ್ದರೆ ಅದು ಮಂತ್ರವಲ್ಲ,ಅದರ ಭಾವ ಬೇರೆ. ಈ ತ್ರಿವಿಧ ಭೇದವನರಿಯದ ವೇಷಧಾರಿಗಳು ಭಕ್ತರಲ್ಲ. ದೇವಭಕ್ತರಾದರೇನು, ಮಲದೇಹಿ ಮಾಂಸಪಿಂಡ ಇರುವದು. ತಮ್ಮ ದೇಹ ಕಲ್ಲುಸೋಂಕಿ ಹಸ್ತ ಸುಚಿತ್ತವಾಯಿತೆಂದು ಪುಕಳಿಯನೊರೆಸುವ ಅರಿವೆಯಲ್ಲಿ ಮಗಿ ಹಿಡಿದು ನೀರು ಹೊಯ್ದುಕೊಂಡು ಶುದ್ಧವಾಯಿತೆಂಬವರು, ಅವರು ಮಲದೇಹಿ, ಅವನ ಹಸ್ತ ಶುದ್ಧವಲ್ಲ, ಅದು ಅಶುದ್ಧ. ಆ ಕೈಯಲಿ ಲಿಂಗವ ಹಿಡಿದುದು ಲಿಂಗವಲ್ಲ, ಅದು ಪ್ರೇತಲಿಂಗ. 'ಸಂಸಾರೀ ಭೂತಃ ಪ್ರಾಣೇನ ಜಾಯತೇ ಪ್ರಾತಃಕಾಲೇ | ಮುಖಂ ದೃಷ್ಟ್ವಾ ಕೋಟಿ ಜನ್ಮನಿ ಸೂಕರಃ||' ಇಂತಪ್ಪ ತಮ್ಮ ಅಂಗದ ಅಶುದ್ಧವ ಕಳೆಯಲಾರದೆ ಲಿಂಗಾಂಗಿ ಲಿಂಗಪ್ರಾಣಿಗಳೆಂದೆನಿಸುವ ವೇಷಧಾರಿಗಳಿಗೆ ಹಂದಿಯ ಜನ್ಮ ತಪ್ಪದೆಂದ ನಿಮ್ಮ ಶರಣ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.