Index   ವಚನ - 2    Search  
 
ಪೃಥ್ವಿ ಅಪ್ಪುಗಳಿಲ್ಲದಂದು, ತೇಜ ವಾಯುಗಳಿಲ್ಲದಂದು, ಆಕಾಶ ಆತ್ಮವಿಲ್ಲದಂದು, ರವಿ ಶಶಿಗಳಿಲ್ಲದಂದು, ಸಪ್ತೇಳುಸಾಗರವಿಲ್ಲದಂದು, ಅಷ್ಟಕುಲಪರ್ವತಂಗಳಿಲ್ಲದಂದು, ಇವೇನೇನೂ ಇಲ್ಲದಂದು, ಅತ್ತತ್ತಲೆ. ನಿಶ್ಚಿಂತ ನಿರಾಕುಳ ನಿರಂಜನ ನಿರ್ಭರಿತ ನಿಃಶೂನ್ಯ ನಿರಾಳ ನಿಷ್ಕಲಲಿಂಗ ತಾನೇ ನೋಡಾ ಝೇಂಕಾರ ನಿಜಲಿಂಗಪ್ರಭುವೆ