Index   ವಚನ - 90    Search  
 
ಬೇರು ಇಲ್ಲದ ಮರ ಹೋಗಿ ಆದಿಯ ಸೇರಿತ್ತಯ್ಯ, ಆ ಮರಕ್ಕೆ ಐದು ಕೊಂಬೆಗಳು ಬೆಳೆದಿರ್ಪವು ನೋಡಾ. ಬ್ರಹ್ಮವೊಂದನೇರಿದ, ವಿಷ್ಣುವೊಂದನೇರಿದ, ರುದ್ರವೊಂದನೇರಿದ, ಈಶ್ವರನೊಂದನೇರಿದ, ಸದಾಶಿವನೊಂದನೇರಿದ- ಈ ಐದು ಕೊಂಬೆಗಳ ಮೆಟ್ಟಿ ತುಟ್ಟತುದಿಯಲೊಂದು ಬಟ್ಟಬಯಲ ಹಣ್ಣಾಗಿಪ್ಪುದು ನೋಡಾ! ಆ ಹಣ್ಣ ಸವಿಯಲೊಡನೆ, ಹಣ್ಣಿನ ಒಡೆಯ ಬಂದು ಸವಿದಾತನ ನುಂಗಿದ ನೋಡಾ, ಝೇಂಕಾರ ನಿಜಲಿಂಗಪ್ರಭುವೆ.