Index   ವಚನ - 925    Search  
 
ಇಕ್ಷುದಂಡಕ್ಕೆ ಕೀಳು ಮೇಲಲ್ಲದೆ ಸಕ್ಕರೆಯ ದಂಡಕ್ಕೆ ಕೀಳು ಮೇಲುಂಟೆ? ಪರುಷಪಾಷಾಣಕ್ಕೆ ಕೀಳು ಮೇಲಲ್ಲದೆ ಕಡೆಯಾಣಿಗುಂಟೆ ಒರೆಗಲ್ಲು? `ಉಂಟು' `ಇಲ್ಲ' ಎಂಬ ಸಂದೇಹ ನಿಂದಲ್ಲಿ ಗುಹೇಶ್ವರಲಿಂಗವು ತಾನೆ ಸಿದ್ಧರಾಮಯ್ಯಾ.