ಆಕಾಶದ ಮೇಲೆ ಏಕಾಂತ ಸೂಳೆಯ ಕಂಡೆನಯ್ಯ.
ಆ ಸೂಳೆಯ ಗೃಹದಲ್ಲಿ ಸಾಸಿರದಳ ಕಮಲಮಂಟಪವ ಕಂಡೆನಯ್ಯ. ಆದಿಯಲ್ಲಿ ಒಬ್ಬ ವಿಟನು, ಮೂವರು ಗೆಳೆಯರ ಕೂಡಿಕೊಂಡು, ಹೃದಯದಲ್ಲಿರ್ದ ರತ್ನವ ತೆಗೆದು, ಆ ಸೂಳೆಗೆ ಒತ್ತೆಯಂ ಕೊಟ್ಟು, ಸಂಗಸಂಯೋಗಮಂ ಮಾಡುವುದ ಮೂವರು ಗೆಳೆಯರು ಕಂಡು ನಿರ್ವಯಲಾದುದ ಕಂಡೆನಯ್ಯ
ಝೇಂಕಾರ ನಿಜಲಿಂಗಪ್ರಭುವೆ.