Index   ವಚನ - 929    Search  
 
ಇದ್ದಿತ್ತೆಂದರಿಯೆ, ಇಲ್ಲವೆಂದರಿಯೆ, ಏನೆಂದರಿಯೆ. ಪಂಚಭೂತಪ್ರಾಣಿಯ ಏಕಭೂತಪ್ರಾಣಿ ಬಂದು ಸೋಂಕಿದಡೆ ಎಹಂಗೆ ಇದ್ದಿತ್ತು ಅಹಂಗೆ ಇದ್ದಿತ್ತಾಗಿ-ಇದೇನೆಂದರಿಯೆ. ಗುಹೇಶ್ವರಲಿಂಗವು ತನ್ನಂತೆ ಮಾಡಿದನಾಗಿ-ಇದೇನೆಂದರಿಯೆ!