Index   ವಚನ - 932    Search  
 
ಇಬ್ಬರ ಮಧ್ಯದಲೊಂದು ಮಗುವು ಹುಟ್ಟಿತ್ತು. ಆ ಮಗುವಿನ ಹುಟ್ಟ ತಾಯಿಯೂ ಅರಿಯಳು, ತಂದೆಯೂ ಅರಿಯನು! ಹೆಸರಿಟ್ಟು ಕರೆದು ಜೋಗುಳವಾಡುತ್ತೈದಾರೆ. ಕೈ ಬಾಯಿಗೆ ಬಂದ ಶಿಶು ಮೈದೋರದಿದ್ದಡೆ, ಕಂಡು ನಾನು ನಾಚಿದೆನು ಕಾಣಾ ಗುಹೇಶ್ವರಾ.