ವಚನ - 937     
 
ಇವಳ ನೋಟವೆನ್ನ ಮರ್ತ್ಯಕ್ಕೆ ತಂದಿತ್ತಯ್ಯಾ. ಇವಳ ಕೂಟ ಸವಿಯನವಗಡಿಸಿ ಕಾಡಿತ್ತಯ್ಯಾ. ಇವಳ ಬೇಟದ ಬೇರ ಹರಿದಲ್ಲಿ ತ್ರಿಪುರ ಹಾಳಾದುದ ಕಂಡೆನು. ಉರಿಯ ಮೇಲೆ ಉರಿ ಎರಗಿದಡೆ ತಂಪು ಮೂಡಿತ್ತ ಕಂಡೆನು. ಕರಿಯ ಬೇಡನ ಕಸ್ತುರಿಯ ಮೃಗ ನುಂಗಿದಡೆ ಹಿರಿಯ ಹೆಂಡತಿ ಓಲೆಗಳೆದುದ ಕಂಡೆನು. ಕಾರಿರುಳ ಕೋಟೆಯಲಿ ಕಲಿಯ ಕಾಳೆಗವ ಗೆಲಿದು ಹೂಳಿರ್ದ ನಿಧಾನವ ಕಂಡೆನು ಕಾಣಾ ಗುಹೇಶ್ವರಾ.