Index   ವಚನ - 303    Search  
 
ಸಜ್ಜನವೆಂಬ ಮಾರ್ಗದಲ್ಲಿ ಒಬ್ಬ ಬಾಲೆಯು ನಿಂದು ನಿಜವ ತೋರುತಿರ್ಪಳು ನೋಡಾ. ಆ ನಿಜವ ಈ ಜನಂಗಳೇನು ಬಲ್ಲರಯ್ಯ? ಅಜ ಹರಿ ಸುರ ನಾರದ ಮೊದಲಾದವರಿಗೆ ಅಗೋಚರವೆನಿಸಿತ್ತು ನೋಡಾ. ಸ್ವಜ್ಞಾನಿಯಾದ ಶರಣನು ಆ ನಿಜವ ನೋಡಬಲ್ಲನಯ್ಯಾ. ಆ ಬಾಲೆಯ ಅಂಗವ ಕೂಡಬಲ್ಲನಯ್ಯ. ಆ ಸಜ್ಜನವೆಂಬ ಮಾರ್ಗವ ಹತ್ತಬಲ್ಲನಯ್ಯ. ಇಂತಪ್ಪ ಶರಣಂಗೆ ನಮೋ ನಮೋ ಎನುತಿರ್ದೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.