Index   ವಚನ - 386    Search  
 
ಧರೆಯ ಮೇಲೆ ಹರಡಿರುವ ಶಿಲೆಯ ತಂದು ಕಲ್ಲುಕುಟಿಕ ಕಟೆದು ಲಿಂಗವ ಮಾಡಿದರೆ ಅದೆಂತು ಲಿಂಗವೆಂಬೆನಯ್ಯ? ಅದು ಶಿಲೆಯು. ಆ ಲಿಂಗವ ತಂದು, ಗುರುವಿನ ಕೈಯಲ್ಲಿ ಕೊಟ್ಟು ದೀಕ್ಷೆ ಉಪದೇಶವಂ ಮಾಡಿ, ಆ ಲಿಂಗವ ಧರಿಸಿಕೊಂಡು ಗುರು ಲಿಂಗ ಜಂಗಮ ಪಾದೋದಕ ಪ್ರಸಾದವ ಸ್ವೀಕರಿಸಿ, ಶಿಲಾಲಿಖಿತವ ತೊಡೆದು ಕಲಾಭೇದವನರಿದು ಇಷ್ಟಲಿಂಗ ಪ್ರಾಣಲಿಂಗ ಭಾವಲಿಂಗವೆಂಬ ಲಿಂಗತ್ರಯಗಳನರಿದು ಇರಬಲ್ಲ ಶರಣರ ಎನಗೊಮ್ಮೆ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.