Index   ವಚನ - 418    Search  
 
ನಿಂದಕರು ನಿಂದಿಸಿದರೆ ಸ್ವಯಜ್ಞಾನಿ ಅಂಜುವನೇನಯ್ಯ? ಆ ನಿಂದಕನ ಅಂತರಂಗದಲ್ಲಿ ಅಹಂಕಾರನೆಂಬ ಕೋಣ ಹುಟ್ಟಿ, ಜ್ಞಾನಿಗಳೆಂದರಿಯದೆ, ಬಾಯಿಗೆ ಬಂದಂತೆ ನುಡಿವ ತರಕಿಮೂಳರ ಎನಗೊಮ್ಮೆ ತೋರದಿರಯ್ಯ ಝೇಂಕಾರ ನಿಜಲಿಂಗಪ್ರಭುವೆ.