Index   ವಚನ - 433    Search  
 
ಆರು ಕೇರಿಗಳಲ್ಲಿ ಆರು ಮೂರ್ತಿಗಳಿಪ್ಪರು ನೋಡಾ. ಆರು ಮೂರ್ತಿಗಳಲ್ಲಿ ಆರು ಶಕ್ತಿಗಳಿಪ್ಪರು ನೋಡಾ. ಆರು ಶಕ್ತಿಗಳು ಆರಾರು ಲಿಂಗಾರ್ಚನೆಯ ಮಾಡಿ ಮೂರುಬಾಗಿಲದಾಂಟಿ ಮಹಾಘನಲಿಂಗವನಾಚರಿಸುತಿರ್ಪರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.