Index   ವಚನ - 958    Search  
 
ಉಪಪಾತಕ ಮಹಾಪಾತಕಂಗಳ ಮಾಡಿದ ಕರ್ಮಂಗಳು ಕೋಟ್ಯನುಕೋಟಿ, ಒಬ್ಬ ಶಿವಶರಣನ ಅಂಗಳವ ಕಂಡಲ್ಲಿ ಅಳಿದು ಹೋಹುದು ನೋಡಯ್ಯಾ. ಅದೇನು ಕಾರಣವೆಂದಡೆ: ಆ ಶಿವಶರಣನ ಅಂತರಂಗದಲ್ಲಿ ಶಿವನಿಪ್ಪನು. ಶಿವನಿದ್ದಲ್ಲಿ ಕೈಲಾಸವಿಪ್ಪುದು. ಕೈಲಾಸವಿದ್ದಲ್ಲಿ ಸಮಸ್ತ ರುದ್ರಗಣಂಗಳಿಪ್ಪರು. ಆ ಸಮಸ್ತ ರುದ್ರಗಣಂಗಳಿಪ್ಪಲ್ಲಿ ಅಷ್ಟಾಷಷ್ಟಿ ತೀರ್ಥಂಗಳಿಂದತ್ತಣ ಮಹಾ ತೀರ್ಥಂಗಳಿಪ್ಪವು. ಇಂತಪ್ಪ ಶರಣ ಸಂಗನಬಸವಣ್ಣನ ಅಂಗಳವ ಕಂಡೆನಾಗಿ ಗುಹೇಶ್ವರಲಿಂಗದ ಕಂಗಳಿಗೆ ತೃಪ್ತಿಯಾಯಿತ್ತು ಕಾಣಾ ಸಿದ್ಧರಾಮಯ್ಯಾ.