Index   ವಚನ - 959    Search  
 
ಉಪಮೆಗುಪಮಾನ ಮನುದೇವತಾದಿಗಳೆಲ್ಲಾ ಜಪತಪ ಮಹಾ ದಿವ್ಯ ಧ್ಯಾನ ಮಂತ್ರಗಳಿಂದ ಪರಿಮಿತ ಸೇವನಾರತರಾಗಿ, ನಿಮ್ಮ ಪದನುತಿಯಿಂ ಕೃತಾರ್ಥರಾಗಿ ತೃಪ್ತಿಪಟ್ಟಿಪ್ಪರಲ್ಲದೆ, ನಿಚ್ಚಯದ ಮಹಿಮೆಯ, ಪರಾಪರಂ ಪರಮಗಮ್ಯಭಾವಾತೀತ ವಿಪುಳ ಜ್ಯೋತಿರ್ಲಿಂಗ ವಿಶ್ವತೋಮುಖ ಮುಸಿಗಿರ್ದ ಘನವಾವುದು? ತಿಳಿಯದೆ ಹೋದರಲ್ಲಾ ಗುಹೇಶ್ವರಾ.