ವಚನ - 974     
 
ಎನ್ನ ತನುವೆ ಚೆನ್ನಬಸವಣ್ಣನಯ್ಯಾ, ಎನ್ನ ಮನವೆ ಮಡಿವಾಳನಯ್ಯಾ, ಎನ್ನ ಪ್ರಾಣವೆ ಸಂಗನಬಸವಣ್ಣನಯ್ಯಾ, ಗುಹೇಶ್ವರಾ, ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲ್ಲಿ ಕಂಡು ಪರಮಸುಖಿಯಾಗಿರ್ದೆನು.