ವಚನ - 977     
 
ಎರಡು ಒಂದಾದ ಬಳಿಕ ಅರ್ಚನೆ ಹಿಂಗಿತ್ತು. ಎರಡು ಒಂದಾದ ಬಳಿಕ ಅರ್ಪಿತ ಹಿಂಗಿತ್ತು. ಎರಡು ಒಂದಾದ ಬಳಿಕ ಆಚಾರ ಹಿಂಗಿತ್ತು. ಎರಡು ಒಂದಾದ ಬಳಿಕ ಅವಧಾನ ಹಿಂಗಿತ್ತು. ಎರಡು ಒಂದಾದ ಬಳಿಕ ಶಬ್ದಕ್ಕೆ ಇಂಬಿಲ್ಲ ರೂಹಿಸಲೆಡೆಯುಂಟೆ ಗುಹೇಶ್ವರಾ?