ವಚನ - 978     
 
ಎರಡು ಕಣ್ಣುಳ್ಳಡೆ ಚತುರ್ಭುಜನೆಂಬೆನು. ಮೂರು ಕಣ್ಣುಳ್ಳಡೆ ಮಹೇಶ್ವರನೆಂಬೆನು. ಮೈಯೆಲ್ಲಾ ಕಣ್ಣಾದಡೆ ಸದಾಶಿವನೆಂಬೆನು. ಗುಹೇಶ್ವರಾ ನಿಮ್ಮ ಶರಣಂಗೆ ಅಂಗಾಲ ಕಣ್ಣು ಮೂಡಿದಡೆ ನಿರುಪಮ ಮಹಿಮ ಅಲ್ಲಯ್ಯನೆಂಬೆನು.